1
ಮತ್ತಾಯನ ಸುವಾರ್ತೆ 10:16
ಪರಿಶುದ್ದ ಬೈಬಲ್
“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.
Compare
Explore ಮತ್ತಾಯನ ಸುವಾರ್ತೆ 10:16
2
ಮತ್ತಾಯನ ಸುವಾರ್ತೆ 10:39
ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು.
Explore ಮತ್ತಾಯನ ಸುವಾರ್ತೆ 10:39
3
ಮತ್ತಾಯನ ಸುವಾರ್ತೆ 10:28
“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.
Explore ಮತ್ತಾಯನ ಸುವಾರ್ತೆ 10:28
4
ಮತ್ತಾಯನ ಸುವಾರ್ತೆ 10:38
ಯಾವನಾದರೂ ನನ್ನನ್ನು ಹಿಂಬಾಲಿಸುವಾಗ ಅವನಿಗೆ ಕೊಡುವಂಥ ಶಿಲುಬೆಯನ್ನು (ಸಂಕಟವನ್ನು) ಅಂಗೀಕರಿಸದಿದ್ದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.
Explore ಮತ್ತಾಯನ ಸುವಾರ್ತೆ 10:38
5
ಮತ್ತಾಯನ ಸುವಾರ್ತೆ 10:32-33
“ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ. ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.
Explore ಮತ್ತಾಯನ ಸುವಾರ್ತೆ 10:32-33
6
ಮತ್ತಾಯನ ಸುವಾರ್ತೆ 10:8
ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.
Explore ಮತ್ತಾಯನ ಸುವಾರ್ತೆ 10:8
7
ಮತ್ತಾಯನ ಸುವಾರ್ತೆ 10:31
ಆದಕಾರಣ ಹೆದರಬೇಡಿ. ನೀವು ಅನೇಕ ಗುಬ್ಬಚ್ಚಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
Explore ಮತ್ತಾಯನ ಸುವಾರ್ತೆ 10:31
8
ಮತ್ತಾಯನ ಸುವಾರ್ತೆ 10:34
“ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.
Explore ಮತ್ತಾಯನ ಸುವಾರ್ತೆ 10:34
Home
Bible
Plans
Videos