ಅದಕ್ಕೆ ಯೇಸು, “ನೀವು ಇಲ್ಲಿ ಕೇಳಿದ ಮತ್ತು ನೋಡಿದ ಸಂಗತಿಗಳನ್ನು ಯೋಹಾನನಿಗೆ ತಿಳಿಸಿರಿ. ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.