ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.
ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.