1
ಮತ್ತಾಯನ ಸುವಾರ್ತೆ 16:24
ಪರಿಶುದ್ದ ಬೈಬಲ್
ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.
Compare
Explore ಮತ್ತಾಯನ ಸುವಾರ್ತೆ 16:24
2
ಮತ್ತಾಯನ ಸುವಾರ್ತೆ 16:18
ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.
Explore ಮತ್ತಾಯನ ಸುವಾರ್ತೆ 16:18
3
ಮತ್ತಾಯನ ಸುವಾರ್ತೆ 16:19
ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.
Explore ಮತ್ತಾಯನ ಸುವಾರ್ತೆ 16:19
4
ಮತ್ತಾಯನ ಸುವಾರ್ತೆ 16:25
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.
Explore ಮತ್ತಾಯನ ಸುವಾರ್ತೆ 16:25
5
ಮತ್ತಾಯನ ಸುವಾರ್ತೆ 16:26
ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?
Explore ಮತ್ತಾಯನ ಸುವಾರ್ತೆ 16:26
6
ಮತ್ತಾಯನ ಸುವಾರ್ತೆ 16:15-16
ಅದಕ್ಕೆ ಆತನು, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.
Explore ಮತ್ತಾಯನ ಸುವಾರ್ತೆ 16:15-16
7
ಮತ್ತಾಯನ ಸುವಾರ್ತೆ 16:17
ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.
Explore ಮತ್ತಾಯನ ಸುವಾರ್ತೆ 16:17
Home
Bible
Plans
Videos