ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು. ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.