1
ಮತ್ತಾಯನ ಸುವಾರ್ತೆ 18:20
ಪರಿಶುದ್ದ ಬೈಬಲ್
ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”
Compare
Explore ಮತ್ತಾಯನ ಸುವಾರ್ತೆ 18:20
2
ಮತ್ತಾಯನ ಸುವಾರ್ತೆ 18:19
ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.
Explore ಮತ್ತಾಯನ ಸುವಾರ್ತೆ 18:19
3
ಮತ್ತಾಯನ ಸುವಾರ್ತೆ 18:2-3
ಯೇಸು ಚಿಕ್ಕ ಮಗುವನ್ನು ತನ್ನ ಹತ್ತಿರಕ್ಕೆ ಕರೆದು ತನ್ನ ಶಿಷ್ಯರ ಮುಂದೆ ಆ ಮಗುವನ್ನು ನಿಲ್ಲಿಸಿ ಹೀಗೆಂದನು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.
Explore ಮತ್ತಾಯನ ಸುವಾರ್ತೆ 18:2-3
4
ಮತ್ತಾಯನ ಸುವಾರ್ತೆ 18:4
ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.
Explore ಮತ್ತಾಯನ ಸುವಾರ್ತೆ 18:4
5
ಮತ್ತಾಯನ ಸುವಾರ್ತೆ 18:5
“ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು.
Explore ಮತ್ತಾಯನ ಸುವಾರ್ತೆ 18:5
6
ಮತ್ತಾಯನ ಸುವಾರ್ತೆ 18:18
“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ.
Explore ಮತ್ತಾಯನ ಸುವಾರ್ತೆ 18:18
7
ಮತ್ತಾಯನ ಸುವಾರ್ತೆ 18:35
“ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.
Explore ಮತ್ತಾಯನ ಸುವಾರ್ತೆ 18:35
8
ಮತ್ತಾಯನ ಸುವಾರ್ತೆ 18:6
“ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.
Explore ಮತ್ತಾಯನ ಸುವಾರ್ತೆ 18:6
9
ಮತ್ತಾಯನ ಸುವಾರ್ತೆ 18:12
“ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?
Explore ಮತ್ತಾಯನ ಸುವಾರ್ತೆ 18:12
Home
Bible
Plans
Videos