ಆದರೆ ನೀವು ಹಾಗೆ ಮಾಡಬಾರದು. ನಿಮ್ಮಲ್ಲಿ ದೊಡ್ಡವನಾಗಲು ಇಚ್ಫಿಸುವವನು ಸೇವಕನಂತೆ ಸೇವೆ ಮಾಡಬೇಕು. ನಿಮ್ಮಲ್ಲಿ ಮೊದಲನೆಯವನಾಗಲು ಇಚ್ಛಿಸುವವನು ಗುಲಾಮನಂತೆ ಸೇವೆ ಮಾಡಬೇಕು. ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.