ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ.
ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ.
ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ,
ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು.
ಆಗ ಆ ಸ್ಥಳವು ಜನಸಮೂಹದ
ಗದ್ದಲದಿಂದ ತುಂಬಿಹೋಗುವುದು.