ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು
ಅನ್ಯಾಯವಾದ ತೀರ್ಪುಕೊಡುವರು.
ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು
ಹಣವನ್ನು ವಸೂಲಿ ಮಾಡುವರು.
ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು
ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು.
ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ.
ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.