1
ಮಾರ್ಕನ ಸುವಾರ್ತೆ 11:24
ಪರಿಶುದ್ದ ಬೈಬಲ್
ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ.
Compare
Explore ಮಾರ್ಕನ ಸುವಾರ್ತೆ 11:24
2
ಮಾರ್ಕನ ಸುವಾರ್ತೆ 11:23
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.
Explore ಮಾರ್ಕನ ಸುವಾರ್ತೆ 11:23
3
ಮಾರ್ಕನ ಸುವಾರ್ತೆ 11:25
ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.
Explore ಮಾರ್ಕನ ಸುವಾರ್ತೆ 11:25
4
ಮಾರ್ಕನ ಸುವಾರ್ತೆ 11:22
ಯೇಸು, “ದೇವರಲ್ಲಿ ನಂಬಿಕೆ ಇಡಿರಿ.
Explore ಮಾರ್ಕನ ಸುವಾರ್ತೆ 11:22
5
ಮಾರ್ಕನ ಸುವಾರ್ತೆ 11:17
ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.
Explore ಮಾರ್ಕನ ಸುವಾರ್ತೆ 11:17
6
ಮಾರ್ಕನ ಸುವಾರ್ತೆ 11:9
ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’
Explore ಮಾರ್ಕನ ಸುವಾರ್ತೆ 11:9
7
ಮಾರ್ಕನ ಸುವಾರ್ತೆ 11:10
“ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.
Explore ಮಾರ್ಕನ ಸುವಾರ್ತೆ 11:10
Home
Bible
Plans
Videos