1
ಮಾರ್ಕನ ಸುವಾರ್ತೆ 16:15
ಪರಿಶುದ್ದ ಬೈಬಲ್
ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.
Compare
Explore ಮಾರ್ಕನ ಸುವಾರ್ತೆ 16:15
2
ಮಾರ್ಕನ ಸುವಾರ್ತೆ 16:17-18
ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು. ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.
Explore ಮಾರ್ಕನ ಸುವಾರ್ತೆ 16:17-18
3
ಮಾರ್ಕನ ಸುವಾರ್ತೆ 16:16
ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.
Explore ಮಾರ್ಕನ ಸುವಾರ್ತೆ 16:16
4
ಮಾರ್ಕನ ಸುವಾರ್ತೆ 16:20
ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.
Explore ಮಾರ್ಕನ ಸುವಾರ್ತೆ 16:20
5
ಮಾರ್ಕನ ಸುವಾರ್ತೆ 16:6
ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.
Explore ಮಾರ್ಕನ ಸುವಾರ್ತೆ 16:6
6
ಮಾರ್ಕನ ಸುವಾರ್ತೆ 16:4-5
ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು. ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು.
Explore ಮಾರ್ಕನ ಸುವಾರ್ತೆ 16:4-5
Home
Bible
Plans
Videos