ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.
ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು.
ಅವನು “ನನ್ನ ಹೆಸರು ದಂಡು, ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು.