ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.
ಜನರೆಲ್ಲರೂ ಊಟಮಾಡಿ ತೃಪ್ತರಾದರು. ಬಳಿಕ ಜನರು ತಿನ್ನಲಾರದೆ ಉಳಿಸಿದ ರೊಟ್ಟಿ ಮತ್ತು ಮೀನುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.