1
ಮಾರ್ಕನ ಸುವಾರ್ತೆ 8:35
ಪರಿಶುದ್ದ ಬೈಬಲ್
ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.
Compare
Explore ಮಾರ್ಕನ ಸುವಾರ್ತೆ 8:35
2
ಮಾರ್ಕನ ಸುವಾರ್ತೆ 8:36
ಒಬ್ಬನು ಪ್ರಪಂಚವನ್ನೆಲ್ಲಾ ಸಂಪಾದಿಸಿಕೊಂಡು ತನ್ನ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಪ್ರಯೋಜನವೇನು?
Explore ಮಾರ್ಕನ ಸುವಾರ್ತೆ 8:36
3
ಮಾರ್ಕನ ಸುವಾರ್ತೆ 8:34
ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.
Explore ಮಾರ್ಕನ ಸುವಾರ್ತೆ 8:34
4
ಮಾರ್ಕನ ಸುವಾರ್ತೆ 8:37-38
ಒಬ್ಬನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಸಾಧ್ಯವೇ? ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.
Explore ಮಾರ್ಕನ ಸುವಾರ್ತೆ 8:37-38
5
ಮಾರ್ಕನ ಸುವಾರ್ತೆ 8:29
ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು.
Explore ಮಾರ್ಕನ ಸುವಾರ್ತೆ 8:29
Home
Bible
Plans
Videos