ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ. ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.