ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು, ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು. ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.