1
ಆದಿಕಾಂಡ 42:21
ಕನ್ನಡ ಸಮಕಾಲಿಕ ಅನುವಾದ
ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.
Compare
Explore ಆದಿಕಾಂಡ 42:21
2
ಆದಿಕಾಂಡ 42:6
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
Explore ಆದಿಕಾಂಡ 42:6
3
ಆದಿಕಾಂಡ 42:7
ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.
Explore ಆದಿಕಾಂಡ 42:7
Home
Bible
Plans
Videos