1
ಆದಿಕಾಂಡ 45:5
ಕನ್ನಡ ಸಮಕಾಲಿಕ ಅನುವಾದ
ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.
Compare
Explore ಆದಿಕಾಂಡ 45:5
2
ಆದಿಕಾಂಡ 45:8
“ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.
Explore ಆದಿಕಾಂಡ 45:8
3
ಆದಿಕಾಂಡ 45:7
ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.
Explore ಆದಿಕಾಂಡ 45:7
4
ಆದಿಕಾಂಡ 45:4
ಆಗ ಯೋಸೇಫನು ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿರಿ,” ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, “ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ!
Explore ಆದಿಕಾಂಡ 45:4
5
ಆದಿಕಾಂಡ 45:6
ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ.
Explore ಆದಿಕಾಂಡ 45:6
6
ಆದಿಕಾಂಡ 45:3
ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.
Explore ಆದಿಕಾಂಡ 45:3
Home
Bible
Plans
Videos