1
ಲೂಕ 16:10
ಕನ್ನಡ ಸಮಕಾಲಿಕ ಅನುವಾದ
“ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.
Compare
Explore ಲೂಕ 16:10
2
ಲೂಕ 16:13
“ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.
Explore ಲೂಕ 16:13
3
ಲೂಕ 16:11-12
ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಮತ್ತೊಬ್ಬರಿಗೆ ಸೇರಿದ ವಸ್ತುಗಳಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ ನಿಮ್ಮ ಪಾಲನ್ನು ನಿಮಗೆ ಯಾರು ಒಪ್ಪಿಸುವರು?
Explore ಲೂಕ 16:11-12
4
ಲೂಕ 16:31
“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”
Explore ಲೂಕ 16:31
5
ಲೂಕ 16:18
“ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”
Explore ಲೂಕ 16:18
Home
Bible
Plans
Videos