1
ಲೂಕ 17:19
ಕನ್ನಡ ಸಮಕಾಲಿಕ ಅನುವಾದ
ಎಂದು ಹೇಳಿ ಅವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
Compare
Explore ಲೂಕ 17:19
2
ಲೂಕ 17:4
ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು.
Explore ಲೂಕ 17:4
3
ಲೂಕ 17:15-16
ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು, ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.
Explore ಲೂಕ 17:15-16
4
ಲೂಕ 17:3
ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.
Explore ಲೂಕ 17:3
5
ಲೂಕ 17:17
ಯೇಸು ಅವನಿಗೆ, “ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ?
Explore ಲೂಕ 17:17
6
ಲೂಕ 17:6
ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.
Explore ಲೂಕ 17:6
7
ಲೂಕ 17:33
ಯಾರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನಿಸುವರೋ ಅವರು ಅದನ್ನು ಕಳೆದುಕೊಳ್ಳುವರು ಮತ್ತು ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಕಾಪಾಡಿಕೊಳ್ಳುವರು.
Explore ಲೂಕ 17:33
8
ಲೂಕ 17:1-2
ಯೇಸು ತಮ್ಮ ಶಿಷ್ಯರಿಗೆ: “ಜನರಿಗೆ ಪಾಪದ ಶೋಧನೆಗಳು ಬಂದೇ ಬರುತ್ತವೆ, ಆದರೆ ಅವು ಯಾರಿಂದ ಬರುತ್ತವೋ ಅವರಿಗೆ ಕಷ್ಟ. ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.
Explore ಲೂಕ 17:1-2
9
ಲೂಕ 17:26-27
“ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು. ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.
Explore ಲೂಕ 17:26-27
Home
Bible
Plans
Videos