1
ಲೂಕ 18:1
ಕನ್ನಡ ಸಮಕಾಲಿಕ ಅನುವಾದ
ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.
Compare
Explore ಲೂಕ 18:1
2
ಲೂಕ 18:7-8
ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ? ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.
Explore ಲೂಕ 18:7-8
3
ಲೂಕ 18:27
ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.
Explore ಲೂಕ 18:27
4
ಲೂಕ 18:4-5
“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ, ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ ” ಎಂದುಕೊಂಡನು.
Explore ಲೂಕ 18:4-5
5
ಲೂಕ 18:17
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
Explore ಲೂಕ 18:17
6
ಲೂಕ 18:16
ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.
Explore ಲೂಕ 18:16
7
ಲೂಕ 18:42
ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
Explore ಲೂಕ 18:42
8
ಲೂಕ 18:19
ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.
Explore ಲೂಕ 18:19
Home
Bible
Plans
Videos