1
ಮತ್ತಾಯ 11:28
ಕನ್ನಡ ಸಮಕಾಲಿಕ ಅನುವಾದ
“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
Compare
Explore ಮತ್ತಾಯ 11:28
2
ಮತ್ತಾಯ 11:29
ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
Explore ಮತ್ತಾಯ 11:29
3
ಮತ್ತಾಯ 11:30
ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು.
Explore ಮತ್ತಾಯ 11:30
4
ಮತ್ತಾಯ 11:27
“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.
Explore ಮತ್ತಾಯ 11:27
5
ಮತ್ತಾಯ 11:4-5
ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೋಹಾನನಿಗೆ ಹೋಗಿ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.
Explore ಮತ್ತಾಯ 11:4-5
6
ಮತ್ತಾಯ 11:15
ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
Explore ಮತ್ತಾಯ 11:15
Home
Bible
Plans
Videos