1
ಮತ್ತಾಯ 14:30-31
ಕನ್ನಡ ಸಮಕಾಲಿಕ ಅನುವಾದ
ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು. ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.
Compare
Explore ಮತ್ತಾಯ 14:30-31
2
ಮತ್ತಾಯ 14:30
ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.
Explore ಮತ್ತಾಯ 14:30
3
ಮತ್ತಾಯ 14:27
ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.
Explore ಮತ್ತಾಯ 14:27
4
ಮತ್ತಾಯ 14:28-29
ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು. ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.
Explore ಮತ್ತಾಯ 14:28-29
5
ಮತ್ತಾಯ 14:33
ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.
Explore ಮತ್ತಾಯ 14:33
6
ಮತ್ತಾಯ 14:16-17
ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು. ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು.
Explore ಮತ್ತಾಯ 14:16-17
7
ಮತ್ತಾಯ 14:18-19
ಯೇಸು, “ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದರು. ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Explore ಮತ್ತಾಯ 14:18-19
8
ಮತ್ತಾಯ 14:20
ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
Explore ಮತ್ತಾಯ 14:20
Home
Bible
Plans
Videos