ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ. ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ. ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.