ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು. ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.