1
ಮತ್ತಾಯ 25:40
ಕನ್ನಡ ಸಮಕಾಲಿಕ ಅನುವಾದ
“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.
Compare
Explore ಮತ್ತಾಯ 25:40
2
ಮತ್ತಾಯ 25:21
“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
Explore ಮತ್ತಾಯ 25:21
3
ಮತ್ತಾಯ 25:29
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.
Explore ಮತ್ತಾಯ 25:29
4
ಮತ್ತಾಯ 25:13
“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.
Explore ಮತ್ತಾಯ 25:13
5
ಮತ್ತಾಯ 25:35
ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.
Explore ಮತ್ತಾಯ 25:35
6
ಮತ್ತಾಯ 25:23
“ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
Explore ಮತ್ತಾಯ 25:23
7
ಮತ್ತಾಯ 25:36
ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.
Explore ಮತ್ತಾಯ 25:36
Home
Bible
Plans
Videos