1
ಮತ್ತಾಯ 9:37-38
ಕನ್ನಡ ಸಮಕಾಲಿಕ ಅನುವಾದ
ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.
Compare
Explore ಮತ್ತಾಯ 9:37-38
2
ಮತ್ತಾಯ 9:13
ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.
Explore ಮತ್ತಾಯ 9:13
3
ಮತ್ತಾಯ 9:36
ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.
Explore ಮತ್ತಾಯ 9:36
4
ಮತ್ತಾಯ 9:12
ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
Explore ಮತ್ತಾಯ 9:12
5
ಮತ್ತಾಯ 9:35
ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.
Explore ಮತ್ತಾಯ 9:35
Home
Bible
Plans
Videos