1
ಮಾರ್ಕ 1:35
ಕನ್ನಡ ಸಮಕಾಲಿಕ ಅನುವಾದ
ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.
Compare
Explore ಮಾರ್ಕ 1:35
2
ಮಾರ್ಕ 1:15
“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.
Explore ಮಾರ್ಕ 1:15
3
ಮಾರ್ಕ 1:10-11
ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
Explore ಮಾರ್ಕ 1:10-11
4
ಮಾರ್ಕ 1:8
ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.
Explore ಮಾರ್ಕ 1:8
5
ಮಾರ್ಕ 1:17-18
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Explore ಮಾರ್ಕ 1:17-18
6
ಮಾರ್ಕ 1:22
ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.
Explore ಮಾರ್ಕ 1:22
Home
Bible
Plans
Videos