1
ಮಾರ್ಕ 10:45
ಕನ್ನಡ ಸಮಕಾಲಿಕ ಅನುವಾದ
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.
Compare
Explore ಮಾರ್ಕ 10:45
2
ಮಾರ್ಕ 10:27
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು.
Explore ಮಾರ್ಕ 10:27
3
ಮಾರ್ಕ 10:52
ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.
Explore ಮಾರ್ಕ 10:52
4
ಮಾರ್ಕ 10:9
ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು.
Explore ಮಾರ್ಕ 10:9
5
ಮಾರ್ಕ 10:21
ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
Explore ಮಾರ್ಕ 10:21
6
ಮಾರ್ಕ 10:51
ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು.
Explore ಮಾರ್ಕ 10:51
7
ಮಾರ್ಕ 10:43
ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.
Explore ಮಾರ್ಕ 10:43
8
ಮಾರ್ಕ 10:15
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
Explore ಮಾರ್ಕ 10:15
9
ಮಾರ್ಕ 10:31
ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು.
Explore ಮಾರ್ಕ 10:31
10
ಮಾರ್ಕ 10:6-8
ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’ ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
Explore ಮಾರ್ಕ 10:6-8
Home
Bible
Plans
Videos