1
ಮಾರ್ಕ 5:34
ಕನ್ನಡ ಸಮಕಾಲಿಕ ಅನುವಾದ
ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.
Compare
Explore ಮಾರ್ಕ 5:34
2
ಮಾರ್ಕ 5:25-26
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.
Explore ಮಾರ್ಕ 5:25-26
3
ಮಾರ್ಕ 5:29
ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
Explore ಮಾರ್ಕ 5:29
4
ಮಾರ್ಕ 5:41
ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.
Explore ಮಾರ್ಕ 5:41
5
ಮಾರ್ಕ 5:35-36
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು. ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.
Explore ಮಾರ್ಕ 5:35-36
6
ಮಾರ್ಕ 5:8-9
ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು. ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.
Explore ಮಾರ್ಕ 5:8-9
Home
Bible
Plans
Videos