1
ಅರಣ್ಯಕಾಂಡ 13:30
ಕನ್ನಡ ಸಮಕಾಲಿಕ ಅನುವಾದ
ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.
Compare
Explore ಅರಣ್ಯಕಾಂಡ 13:30
2
ಅರಣ್ಯಕಾಂಡ 13:33
ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.
Explore ಅರಣ್ಯಕಾಂಡ 13:33
3
ಅರಣ್ಯಕಾಂಡ 13:31
ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.
Explore ಅರಣ್ಯಕಾಂಡ 13:31
4
ಅರಣ್ಯಕಾಂಡ 13:32
ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.
Explore ಅರಣ್ಯಕಾಂಡ 13:32
5
ಅರಣ್ಯಕಾಂಡ 13:27
ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.
Explore ಅರಣ್ಯಕಾಂಡ 13:27
6
ಅರಣ್ಯಕಾಂಡ 13:28
ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು.
Explore ಅರಣ್ಯಕಾಂಡ 13:28
7
ಅರಣ್ಯಕಾಂಡ 13:29
ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.
Explore ಅರಣ್ಯಕಾಂಡ 13:29
8
ಅರಣ್ಯಕಾಂಡ 13:26
ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
Explore ಅರಣ್ಯಕಾಂಡ 13:26
Home
Bible
Plans
Videos