ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು. ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ, ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.