1
ಅರಣ್ಯಕಾಂಡ 21:8
ಕನ್ನಡ ಸಮಕಾಲಿಕ ಅನುವಾದ
ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.
Compare
Explore ಅರಣ್ಯಕಾಂಡ 21:8
2
ಅರಣ್ಯಕಾಂಡ 21:9
ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.
Explore ಅರಣ್ಯಕಾಂಡ 21:9
3
ಅರಣ್ಯಕಾಂಡ 21:5
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.
Explore ಅರಣ್ಯಕಾಂಡ 21:5
4
ಅರಣ್ಯಕಾಂಡ 21:6
ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.
Explore ಅರಣ್ಯಕಾಂಡ 21:6
5
ಅರಣ್ಯಕಾಂಡ 21:7
ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.
Explore ಅರಣ್ಯಕಾಂಡ 21:7
Home
Bible
Plans
Videos