1
ಅರಣ್ಯಕಾಂಡ 22:28
ಕನ್ನಡ ಸಮಕಾಲಿಕ ಅನುವಾದ
ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.
Compare
Explore ಅರಣ್ಯಕಾಂಡ 22:28
2
ಅರಣ್ಯಕಾಂಡ 22:31
ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.
Explore ಅರಣ್ಯಕಾಂಡ 22:31
3
ಅರಣ್ಯಕಾಂಡ 22:32
ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.
Explore ಅರಣ್ಯಕಾಂಡ 22:32
4
ಅರಣ್ಯಕಾಂಡ 22:30
ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.
Explore ಅರಣ್ಯಕಾಂಡ 22:30
5
ಅರಣ್ಯಕಾಂಡ 22:29
ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.
Explore ಅರಣ್ಯಕಾಂಡ 22:29
6
ಅರಣ್ಯಕಾಂಡ 22:27
ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
Explore ಅರಣ್ಯಕಾಂಡ 22:27
Home
Bible
Plans
Videos