ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ,
ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು.
ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು.
ಅವರು ನನ್ನ ಹೆಸರನ್ನು ಕರೆಯುವರು.
ನಾನು ಅವರಿಗೆ ಉತ್ತರಕೊಡುವೆನು.
ನಾನು, ‘ಇವರು ನನ್ನ ಜನರೆಂದು ಹೇಳುವೆನು,’
‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.