1 ಕೊರಿಂಥದವರಿಗೆ 15:17-20
1 ಕೊರಿಂಥದವರಿಗೆ 15:17-20 KANJV-BSI
ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿಷ್ಪ್ರಯೋಜನವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನವರಾಗಿ ನಿದ್ರೆಹೋದವರು ನಾಶವಾದರು. ಈ ಜೀವಮಾನಕಾಲದ ಪೂರ್ತಿಗೆ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡದ್ದೇ ಹೊರತು ಮತ್ತೇನೂ ಇಲ್ಲದಿದ್ದರೆ ಎಲ್ಲಾ ಮನುಷ್ಯರಲ್ಲಿಯೂ ನಿರ್ಭಾಗ್ಯರೇ ಸರಿ. ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದೇ ಇದ್ದಾನೆ; ನಿದ್ರೆಹೋದವರಲ್ಲಿ ಪ್ರಥಮಫಲವಾದನು.