YouVersion Logo
Search Icon

2 ಕೊರಿಂಥದವರಿಗೆ 5

5
1ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ. 2ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ, 3ಅಂದರೆ ಆ ದಿನದಲ್ಲಿ ನಾವು ಇನ್ನೂ ದೇಹದಲ್ಲಿಯೇ#5.3 ಮೂಲ: ನಿರ್ವಾಣರಾಗದಿದ್ದರೆ. ಇದ್ದರೆ ಆ ನಿವಾಸವನ್ನು ದೇಹದ ಮೇಲೆಯೇ ಧರಿಸಿಕೊಳ್ಳುವೆವು. 4ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ. 5ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಮಾಡಿರುವವನು ದೇವರೇ; ಆತನು ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
6ಹೀಗಿರುವದರಿಂದ ನಾವು ಯಾವಾಗಲೂ ಧೈರ್ಯವುಳ್ಳವರಾಗಿದ್ದೇವೆ. 7ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವಾದದರಿಂದ ದೇಹದಲ್ಲಿ ವಾಸಿಸುವವರೆಗೂ ಕರ್ತನಿಗೆ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆಂಬದನ್ನು ಬಲ್ಲೆವು. 8ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ. 9ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ. 10ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.
ಅಪೊಸ್ತಲರು ಕ್ರಿಸ್ತನ ಪ್ರೀತಿಯಿಂದ ಪ್ರೇರಣೆ ಹೊಂದಿ ಸಮಾಧಾನ ವಾಕ್ಯವನ್ನು ಹೇಳುವ ರಾಯಭಾರಿಗಳಾಗಿ ಎಲ್ಲಾ ಸಂಗತಿಗಳಲ್ಲಿ ತಮ್ಮನ್ನು ದೇವರ ಸೇವಕರೆಂದು ತೋರಿಸಿಕೊಂಡದ್ದು
11ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ. 12ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹಿಗ್ಗದೆ ತೋರಿಕೆಯ ವಿಷಯದಲ್ಲಿ ಮಾತ್ರ ಹಿಗ್ಗುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳುವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯದಲ್ಲಿ ಹಿಗ್ಗುವದಕ್ಕೆ ನಿಮಗೆ ಆಸ್ಪದಕೊಡುತ್ತೇವೆ. 13ನಮಗೆ ಬುದ್ಧಿಪರವಶವಾಗಿದ್ದರೆ ಅದು ದೇವರ ಮಹಿಮೆಗಾಗಿಯೇ ಅದೆ; ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿ ಅದೆ. 14ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು. 15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ. 17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. 18ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; 19ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.
20ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ. 21ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.

Highlight

Share

Copy

None

Want to have your highlights saved across all your devices? Sign up or sign in