YouVersion Logo
Search Icon

2 ಸಮುವೇಲನು 22

22
ದಾವೀದನು ರಚಿಸಿದ ಸ್ತುತಿಗೀತ
1ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -
2ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ;
3ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ
ನನ್ನ ಶರಣನೂ ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
4ಯೆಹೋವನು ಸ್ತೋತ್ರಕ್ಕೆ ಅರ್ಹನು;
ನಾನು ಆತನಿಗೆ ಮೊರೆಯಿಡಲು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
5ಮರಣಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು.
ನಾಶಪ್ರವಾಹವು ನನ್ನನ್ನು ನಡುಗಿಸಿತು.
6ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು;
ಮರಣಕರವಾದ ಉರ್ಲುಗಳು ನನ್ನೆದುರಿನಲ್ಲಿದ್ದವು.
7ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
ನನ್ನ ದೇವರನ್ನು ಪ್ರಾರ್ಥಿಸಿದೆನು.
ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು;
ನನ್ನ ಕೂಗು ಆತನ ಸನ್ನಿಧಿಗೆ ಕೇಳಿಸಿತು.
8ಆಗ ಆತನಿಗೆ ಸಿಟ್ಟೇರಿದದರಿಂದ ಭೂವಿುಯು ಗಡಗಡನೆ ಕಂಪಿಸಿತು;
ಆಕಾಶದ ಆಧಾರಗಳು ನಡುಗಿ ಕದಲಿದವು.
9ಆತನ ಮೂಗಿನಿಂದ ಹೊಗೆಯು ಬಂತು;
ಆತನ ಬಾಯಿಂದ ಅಗ್ನಿಜ್ವಾಲೆಹೊರಟು ಸಿಕ್ಕಿದ್ದೆಲ್ಲವನ್ನೂ ದಹಿಸಿ ಕೆಂಡವನ್ನಾಗಿ ಮಾಡಿತು.
10ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು;
ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
11ಕೆರೂಬಿವಾಹನನಾಗಿ ಹಾರಿ
ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.
12ಕತ್ತಲನ್ನೂ ಜಲಮಯವಾಗಿರುವ ನೀಲಮೇಘಗಳನ್ನೂ
ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡನು.
13ಆತನ ಸಾನ್ನಿಧ್ಯಪ್ರಕಾಶದಿಂದ ಉರಿಗೆಂಡಗಳು ಹೊರಟವು.
14ಯೆಹೋವನು ಆಕಾಶದಿಂದ ಗುಡುಗಿದನು; ಪರಾತ್ಪರನು ಧ್ವನಿಗೊಟ್ಟನು.
15ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿ ಬಿಟ್ಟನು;
ಸಿಡಿಲಿನಿಂದ ಕಳವಳಗೊಳಿಸಿದನು.
16ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ
ಸಮುದ್ರದ ತಳವು ಕಾಣಿಸಿತು, ಭೂಮಂಡಲದ ಅಸ್ತಿವಾರಗಳು ತೋರಬಂದವು.
17ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು
ಮಹಾಜಲರಾಶಿಗಳೊಳಗಿಂದ ಎಳೆದನು.
18ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ
ನನ್ನನ್ನು ಬಿಡಿಸಿ ರಕ್ಷಿಸಿದನು.
19ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು;
ಆಗ ಯೆಹೋವನು ನನಗೆ ಉದ್ಧಾರಕನಾದನು.
20ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು;
ನನ್ನನ್ನು ಮೆಚ್ಚಿ ರಕ್ಷಿಸಿದನು.
21ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು;
ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
22ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ;
ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
23ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು;
ಆತನ ವಿಧಿಗಳಿಂದ ತೊಲಗಿಹೋಗಲಿಲ್ಲ.
24ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು;
ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
25ಆದದರಿಂದ ನಾನು ನೀತಿವಂತನೂ ನಿರಪರಾಧಿಯೂ ಎಂದು ನೋಡಿ
ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
26ನೀನು ಕೃಪೆಯುಳ್ಳವನಿಗೆ ಕೃಪಾವಂತನೂ
ದೋಷವಿಲ್ಲದವನಿಗೆ ನಿರ್ದೋಷಿಯೂ
27ಶುದ್ಧನಿಗೆ ಪರಿಶುದ್ಧನೂ
ಮೂರ್ಖನಿಗೆ ವಕ್ರನೂ ಆಗಿರುವಿ.
28ದೀನರನ್ನು ಉದ್ಧರಿಸುತ್ತೀ;
ಹವ್ಮಿುನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತೀ.
29ಯೆಹೋವನೇ, ನನ್ನ ದೀಪವು ನೀನೇ;
ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವನು.
30ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು;
ನನ್ನ ದೇವರ ಸಹಾಯದಿಂದ ಪ್ರಾಕಾರವನ್ನು ಲಂಘಿಸುವೆನು.
31ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು;
ಯೆಹೋವನ ವಚನವು ಶುದ್ಧವಾದದ್ದು.
ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
32ಯೆಹೋವನಲ್ಲದೆ ದೇವರು ಯಾರು?
ನಮ್ಮ ದೇವರ ಹೊರತು ಶರಣನು ಎಲ್ಲಿ?
33ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ;
ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
34ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ.
ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
35ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದದರಿಂದ
ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
36ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ;
ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
37ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದರಿಂದ
ನನ್ನ ಹರಡುಗಳು ಕದಲುವದಿಲ್ಲ.
38ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು;
ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ.
39ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು;
ಅವರು ನನ್ನ ಪಾದದ ಕೆಳಗೆ ಬೀಳುವರು.
40ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ;
ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.
41ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ;
ನನ್ನ ಹಗೆಯವರನ್ನು ನಿರ್ಮೂಲ ಮಾಡುವೆನು.
42ಅವರು ಸುತ್ತಲೂ ನೋಡಿದರೂ ರಕ್ಷಿಸುವವನಿಲ್ಲ;
ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
43ಭೂವಿುಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು;
ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
44ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದೀ;
ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದೀ.
ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
45ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.
ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
46ಅವರು ಧೈರ್ಯಗುಂದಿದವರಾಗಿ
ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
47ಯೆಹೋವನು ಚೈತನ್ಯಸ್ವರೂಪನು;
ನನ್ನ ಶರಣನಿಗೆ ಸ್ತೋತ್ರ!
ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ!
48ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು;
ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
49ಶತ್ರುಗಳಿಂದ ನನ್ನನ್ನು ಬಿಡುಸುವಾತನೇ,
ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ;
ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
50ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು;
ನಿನ್ನ ನಾಮವನ್ನು ಸಂಕೀರ್ತಿಸುವೆನು;
51ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ;
ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ
ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

Highlight

Share

Copy

None

Want to have your highlights saved across all your devices? Sign up or sign in

Videos for 2 ಸಮುವೇಲನು 22