YouVersion Logo
Search Icon

ಅಪೊಸ್ತಲರ ಕೃತ್ಯಗಳು 2:24-32

ಅಪೊಸ್ತಲರ ಕೃತ್ಯಗಳು 2:24-32 KANJV-BSI

ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು. ಆತನ ವಿಷಯದಲ್ಲಿ ದಾವೀದನು - ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವದನ್ನು ನೋಡುತ್ತಿದ್ದೆನು. ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು. ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವದು; ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ. ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ. ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ ಮುಂದಾಗುವದನ್ನು ಕಂಡು ಕ್ರಿಸ್ತನ ಪುನರುತ್ಥಾನವನ್ನೇ ಕುರಿತು - ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ ಆತನ ಶರೀರವು ಕೊಳೆಯುವ ಅವಸ್ಥೆಯನ್ನನುಭವಿಸುವದಿಲ್ಲವೆಂತಲೂ ಹೇಳಿದನು. ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.