YouVersion Logo
Search Icon

ಇಬ್ರಿಯರಿಗೆ 11

11
ನಂಬಿಕೆಯ ಮಹತ್ವಕ್ಕೆ ದೃಷ್ಟಾಂತಗಳು
1ನಂಬಿಕೆಯೋ ನಾವು ನಿರೀಕ್ಷಿಸುವವುಗಳ#11.1 ಅಥವಾ, ನಿರೀಕ್ಷಿಸುವವುಗಳ ಆಧಾರವೂ, ಕಣ್ಣಿಗೆ ಕಾಣದೆ ಇರುವವುಗಳ ಪ್ರಮಾಣವೂ ಆಗಿದೆ; ರೋಮಾ. 8.24; 2 ಕೊರಿ. 4.18; 5.7; 1 ಪೇತ್ರ. 1.8. ವಿಷಯವಾಗಿ ಭರವಸದಿಂದಿರುವದೂ ಕಣ್ಣಿಗೆ ಕಾಣದವುಗಳನ್ನು ನಿಜವೆಂದು ತಿಳುಕೊಳ್ಳುವದೂ ಆಗಿದೆ. 2ನಮ್ಮ ಪೂರ್ವಿಕರು ನಂಬಿಕೆಯುಳ್ಳವರಾಗಿದ್ದದರಿಂದಲೇ ಒಳ್ಳೇ ಹೆಸರನ್ನು ಹೊಂದಿದರು. 3ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಂಬಿಕೆಯಿಂದಲೇ ನಾವು ತಿಳಿದುಕೊಂಡು ಕಾಣಿಸುವ ಈ ಜಗತ್ತು ದೃಶ್ಯ ವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.
5ಹನೋಕನು ಮರಣವನ್ನು ಅನುಭವಿಸದೆ ಒಯ್ಯಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರಿಗೆ ಮೆಚ್ಚಿಕೆಯಾದವನಾಗಿದ್ದನೆಂದು ಸಾಕ್ಷಿ ಉಂಟು. 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.
7ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
8ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. 9ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು. 10ಯಾಕಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
11ಇದಲ್ಲದೆ ಸಾರಳು ವಾಗ್ದಾನಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವದಕ್ಕೆ ಶಕ್ತಿಯನ್ನು ಹೊಂದಿದಳು. 12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಕ್ಕಳು ಹುಟ್ಟಿದರು.
13ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು. 14ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರೆಂಬರ್ಥವನ್ನು ವ್ಯಕ್ತಪಡಿಸುತ್ತಾರೆ. 15ತಾವು ಹೊರಟುಬಂದಿದ್ದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಯಾವಾಗಲೂ ಅವಕಾಶವಿತ್ತು. 16ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
17-18ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು. 19ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ#11.19 ಮೂಲ: ಸತ್ತವರೊಳಗಿಂದ ಸಾಮ್ಯರೂಪವಾಗಿ ಅವನನ್ನು ಹೊಂದಿದನು. ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.
20ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದಾಗ ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಸೂಚಿಸಿದನು. 21ಯಾಕೋಬನು ತಾನು ಸಾಯುತ್ತಿರುವಾಗ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು; ತನ್ನ ಕೋಲಿನ ಮೇಲೆ ಬಾಗಿಕೊಂಡು ದೇವರಿಗೆ ನಮಸ್ಕಾರಮಾಡಿದನು. 22ಯೋಸೇಫನು ತೀರಿಹೋಗುವಾಗ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತಾಡಿ ತನ್ನ ಶವವನ್ನು ತಕ್ಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆಕೊಟ್ಟನು.
23ಮೋಶೆ ಹುಟ್ಟಿದಾಗ ಅವನ ತಂದೆ ತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. 24ಮೋಶೆಯು ದೊಡ್ಡವನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. 25ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು. 26ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು. 27ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು. 28ಚೊಚ್ಚಲಮಕ್ಕಳನ್ನು ಸಂಹರಿಸುವವನು ಇಸ್ರಾಯೇಲ್ಯರನ್ನು ಮುಟ್ಟದಂತೆ ಅವನು ಪಸ್ಕವೆಂಬ ಊಟವನ್ನೂ ರಕ್ತಪ್ರೋಕ್ಷಣಾಚಾರವನ್ನೂ ನೇವಿುಸಿದ್ದು ನಂಬಿಕೆಯಿಂದಲೇ.
29ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು. 30ನಂಬಿಕೆಯಿಂದಲೇ ಅವರು ಏಳು ದಿವಸಗಳ ತನಕ ಎರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. 31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು. 33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು; 34ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು. 36ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು. 37ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಕೆಲವರನ್ನು ಗರಗಸದಿಂದ ಕೊಯ್ದು ಕೊಂದರು; ದೇವದ್ರೋಹಿಗಳಾಗಿ ಪ್ರಾಣವನ್ನು ಉಳಿಸಿಕೊಳ್ಳಿರೆಂದು ಕೆಲವರನ್ನು ಪ್ರೇರೇಪಿಸಿದರು; ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ತಿರುಗಾಡಿದರು. 38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಹೆಸರನ್ನು ಸಂಪಾದಿಸಿಕೊಂಡಿದ್ದರೂ ವಾಗ್ದಾನದ ಫಲವನ್ನು ಹೊಂದಲಿಲ್ಲ; 40ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ಸಂಕಲ್ಪಿಸಿದನು.

Highlight

Share

Copy

None

Want to have your highlights saved across all your devices? Sign up or sign in