YouVersion Logo
Search Icon

ಇಬ್ರಿಯರಿಗೆ 6

6
1ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು, 2ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ. 3ಮತ್ತು ದೇವರ ಚಿತ್ತವಾದರೆ ಹೀಗೆ ಸಾಗುತ್ತಾ ಹೋಗುವೆವು.
4ಒಂದು ಸಾರಿ ಜ್ಞಾನಪ್ರಕಾಶದಲ್ಲಿ ಸೇರಿ ಪರಲೋಕದಿಂದಾದ ದಾನದ ಅನುಭವವನ್ನು ಹೊಂದಿ 5ಪವಿತ್ರಾತ್ಮವರದಲ್ಲಿ ಪಾಲುಗಾರರಾಗಿ ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಮಹತ್ವವನ್ನೂ ಅನುಭವಿಸಿದವರು ಭ್ರಷ್ಟರಾದರೆ 6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಎಲ್ಲರ ಮುಂದೆ ಅವಮಾನಪಡಿಸುವವರೂ ಆಗಿದ್ದಾರೆ. 7ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; 8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.
9ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇರುವ ಸ್ಥಿತಿಯಲ್ಲಿದ್ದೀರೆಂದು ದೃಢವಾಗಿ ನಂಬಿದ್ದೇನೆ. 10ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.
ದೇವರ ವಾಗ್ದಾನಗಳು ಎಷ್ಟು ಮಾತ್ರಕ್ಕೂ ತಪ್ಪುವದಿಲ್ಲವೆಂಬದು
11ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ. 12ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ. 13ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು - 14ನಿಜವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. 15ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು. 16ಮನುಷ್ಯರು ತಮಗಿಂತ ಹೆಚ್ಚಿನವನ ಆಣೆಯಿಡುತ್ತಾರಷ್ಟೆ; ಮಾತಿಗೆ ಆಣೆಯಿಟ್ಟು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. 17ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. 18ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು. 19ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು. 20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

Highlight

Share

Copy

None

Want to have your highlights saved across all your devices? Sign up or sign in