YouVersion Logo
Search Icon

ಯೆಶಾಯ 41

41
ಯೆಹೋವನು ಜನಾಂಗಗಳನ್ನೂ ಅವುಗಳ ದೇವರುಗಳನ್ನೂ ನ್ಯಾಯವಿಚಾರಣೆಗೆ ಕರೆಯುವದು
ಕೋರೆಷನ ದಿಗ್ವಿಜಯಕ್ಕೆ ಯೆಹೋವನೇ ಕಾರಣ
1ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ. 2ಮೂಡಲಲ್ಲಿ#41.2 ಅಥವಾ: ನ್ಯಾಯಸ್ವರೂಪನನ್ನು ತನ್ನ ಪಾದಸೇವಕನನ್ನಾಗಿ ಮೂಡಲಿಂದ ಎಬ್ಬಿಸಿ ತಂದು. ಅಥವಾ: ನ್ಯಾಯದ ಪಾದ ಸೇವಕನನ್ನು ಮೂಡಲಿಂದ ಎಬ್ಬಿಸಿ ತಂದು. 2 ಪೂರ್ವ. 36.23. ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ#41.2 ಪಾಠಾಂತರ: ಅವರನ್ನು ಅವನ ಕತ್ತಿಗೆ ದೂಳಿನಂತೆಯೂ ಅವನ ಬಿಲ್ಲಿಗೆ ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲಿನಂತೆಯೂ ಗುರಿಮಾಡಿ. ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ 3ಅವನು ಅವರನ್ನು ಹಿಂದಟ್ಟುತ್ತಾ ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದುಹೋಗುವಂತೆ ಗೈದವನು ಯಾರು? 4ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ. 5ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂವಿುಯ ಕಟ್ಟಕಡೆಯವರು ನಡುಗಿದರು, ಎಲ್ಲರೂ ನೆರೆದುಬಂದರು. 6ಒಬ್ಬರಿಗೊಬ್ಬರು ಸಹಾಯಮಾಡಿದರು, ಒಬ್ಬನಿಗೊಬ್ಬನು ಧೈರ್ಯವಾಗಿರು ಎಂದು ಹೇಳಿದನು. 7ಬೆಸಿಗೆ ಚೆನ್ನಾಗಿದೆ ಎಂದು ಹೇಳಿ ಶಿಲ್ಪಿಯು ಎರಕದವನನ್ನೂ ಸುತ್ತಿಗೆಯಿಂದ ಸಮತಟ್ಟುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು; ವಿಗ್ರಹವನ್ನು ಅಲುಗದಂತೆ ಮೊಳೆಗಳಿಂದ ಬಿಗಿದರು.
ಇಸ್ರಾಯೇಲನ್ನು ಧೈರ್ಯಗೊಳಿಸುವ ವಾಗ್ದಾನಗಳು
8ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ, 9ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ, 10ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. 11ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು; 12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. 13ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. 14ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ. 15ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ. 16ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ. 17ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. 18ಬೋಳುಗುಡ್ಡಗಳಲ್ಲಿ ನದಿಗಳನ್ನು, ತಗ್ಗುಗಳಲ್ಲಿ ಒರತೆಗಳನ್ನು ಹೊರಡಿಸಿ ಅರಣ್ಯವನ್ನು ಕೆರೆಯಾಗಿಯೂ ಮರುಭೂವಿುಯನ್ನು ಬುಗ್ಗೆಗಳಾಗಿಯೂ ಮಾಡುವೆನು. 19ದೇವದಾರು ಕಸ್ತೂರಿಜಾಲಿ#41.19 ಮೂಲ: ಸಿಟ್ಟಾ. ಸುಗಂಧ ಒಲೀವ ಮರಗಳನ್ನು ಅಡವಿಯಲ್ಲಿ ನೆಡುವೆನು, ತುರಾಯಿ ತಪಸಿ#41.19 ಮೂಲ: ತಿದ್ಹಾರ್. ತಿಲಕ#41.19 ಮೂಲ: ತೆಯಶ್ಯೂರ್. ವೃಕ್ಷಗಳನ್ನು ಅರಣ್ಯದಲ್ಲಿ ತೋಪಾಗಿ ಬೆಳೆಯಿಸುವೆನು; 20ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.
ದೇವತೆಗಳಿಗೆ ಕಾಲಜ್ಞಾನವಿಲ್ಲದಿರುವದು
21ಯಾಕೋಬ್ಯರ ಅರಸನಾದ ಯೆಹೋವನು ಹೀಗನ್ನುತ್ತಾನೆ - ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ. 22ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ#41.22 ಅಥವಾ: ಮುಂದಿನವುಗಳನ್ನು ಇಂಥವುಗಳೆಂದು ಸೂಚಿಸಿರಿ; ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಗ್ರಹಿಸುವೆವು. ಇಲ್ಲವೆ ನೀವೇ ಆ ಕಾರ್ಯಗಳ ಫಲವನ್ನು ಅರುಹಿರಿ. ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಗ್ರಹಿಸುವೆವು; ಅಥವಾ ಭವಿಷ್ಯತ್ತುಗಳನ್ನು ಅರುಹಿರಿ. 23ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದಾಗತಕ್ಕವುಗಳನ್ನು ತಿಳಿಸಿರಿ; ನಾವು ಒಟ್ಟಿಗೆ ಕಕ್ಕಾಬಿಕ್ಕಿಯಾಗಿ ನೋಡುವಂತೆ ಮೇಲಾಗಲಿ ಕೇಡಾಗಲಿ ಏನಾದರೂ ಮಾಡಿರಿ. 24ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮರೆಹೊಗುವವರು ತುಚ್ಫರೇ ಸರಿ! 25ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ#41.25 ಅಥವಾ: ನನ್ನ ಹೆಸರನ್ನೆತ್ತಿ ಪ್ರಾರ್ಥಿಸುವವನು. ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು. 26ಕಾರ್ಯವು ನಡೆಯುವದಕ್ಕೆ ಮುಂಚೆ [ಇವರಲ್ಲಿ] ಯಾವನು ಅದನ್ನು ಅರುಹಿದ್ದಾನೆ? ಅರುಹಿದ್ದರೆ [ಅವನು ನಿಜ ದೇವರೆಂದು] ನಮಗೆ ಗೊತ್ತಾಗುವದು; ಯಾವನು ಮುಂತಿಳಿಸಿದ್ದಾನೆ? ತಿಳಿಸಿದ್ದರೆ ಅವನನ್ನು ಸತ್ಯವಂತನೆನ್ನುವೆವು. ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವದಿಲ್ಲ. 27ಇಗೋ#41.27 ಅಥವಾ: ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ನೋಡು ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇವಿುಗೆ ಅನುಗ್ರಹಿಸುವೆನು. ನೋಡು ಎನ್ನುವ ಮುಂದೂತನನ್ನು ಚೀಯೋನಿಗೆ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇವಿುಗೆ, ಅನುಗ್ರಹಿಸುವೆನು. 28ನಾನು ನೋಡಲು ಇವರಲ್ಲಿ ಸಮರ್ಥರು ಯಾರೂ ಇಲ್ಲ; ನಾನು ಪ್ರಶ್ನೆಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ. 29ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!

Highlight

Share

Copy

None

Want to have your highlights saved across all your devices? Sign up or sign in