ಮಲಾಕಿಯ 3
3
1ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ. 2ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ; 3ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು. 4ಆಗ ಯೆಹೂದದ ಮತ್ತು ಯೆರೂಸಲೇವಿುನ ನೈವೇದ್ಯವು ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾಗಿದ್ದಂತೆ ಆಗಿರುವದು. 5ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. 6ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.
ನೈವೇದ್ಯವನ್ನು ಸಲ್ಲಿಸದ ದೇವದ್ರೋಹದ ಖಂಡನೆ
7ನಿಮ್ಮ ಪಿತೃಗಳ ಕಾಲದಿಂದಲೂ ನೀವು ನನ್ನ ವಿಧಿಗಳಿಗೆ ಓರೆಯಾದಿರಿ, ಅವುಗಳನ್ನು ಅನುಸರಿಸಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಯಾವ ವಿಷಯದಲ್ಲಿ ತಿರುಗೋಣವೆನ್ನುತ್ತೀರಾ? 8ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ. 9ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ. 10ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ. 11ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ. 12ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.
ಅಪನಂಬಿಕೆಯ ಖಂಡನೆ; ಭಕ್ತರ ಮುಂದಿನ ಉತ್ಸಾಹ
13ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ? 14ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು; 15ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.
16ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. 17ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು. 18ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.
Currently Selected:
ಮಲಾಕಿಯ 3: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.