YouVersion Logo
Search Icon

ಮಲಾಕಿಯ 4

4
1ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು. 2ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; 3ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.
ಎಲೀಯನ ಬರುವಿಕೆ
4ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಮೋಶೆಗೆ ನೇವಿುಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ. 5ನಾನು ಬಂದು ದೇಶವನ್ನು#4.5 ಅಥವಾ: ಲೋಕವನ್ನು. ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು; 6ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.

Highlight

Share

Copy

None

Want to have your highlights saved across all your devices? Sign up or sign in