ಮತ್ತಾಯ 11
11
1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.
ಸ್ನಾನಿಕನಾದ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಕೊಟ್ಟ ಉತ್ತರ
(ಲೂಕ. 7.18-35)
2ಯೋಹಾನನು ಕ್ರಿಸ್ತನ#11.2 ಅಥವಾ, ಆದರೆ ಕ್ರಿಸ್ತನು ಮಾಡತಕ್ಕ ಕೆಲಸಗಳು [ಯೆಶಾ. 35.5, 6; 61.1] ನಡೆಯುತ್ತವೆಂಬ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿ ಯೇಸುವಿನ ಬಳಿಗೆ. ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿ ಕೇಳಿ ಆತನ ಬಳಿಗೆ ಶಿಷ್ಯರನ್ನು ಕಳುಹಿಸಿ - 3ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು. 4,5ಆತನು ಅವರಿಗೆ ಪ್ರತ್ಯುತ್ತರವಾಗಿ - ಕುರುಡರಿಗೆ ಕಣ್ಣು ಬರುತ್ತವೆ; ಕುಂಟರಿಗೆ ಕಾಲು ಬರುತ್ತವೆ; ಕುಷ್ಠರೋಗಿಗಳು ಶುದ್ಧರಾಗುತ್ತಾರೆ; ಕಿವುಡರಿಗೆ ಕಿವಿ ಬರುತ್ತವೆ; ಸತ್ತವರು ಜೀವವನ್ನು ಹೊಂದುತ್ತಾರೆ; ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ; ನೀವು ಹೋಗಿ ಕಂಡುಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ. 6ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು.
7ಅವರು ಹೊರಟುಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 8ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ. 9ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವದಕ್ಕೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.
10ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ;
ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು
ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಇವನೇ. 11ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕನಾದ ಯೋಹಾನನಿಗಿಂತ ದೊಡ್ಡವನು ಎದ್ದಿಲ್ಲ. ಆದರೂ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 12ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ. 13ಪ್ರವಾದಿಗಳೆಲ್ಲರೂ ಧರ್ಮಶಾಸ್ತ್ರವೂ ಪ್ರವಾದಿಸುವದು ಯೋಹಾನನ ತನಕ ಇತ್ತು. 14ನಿಮಗೆ ಗ್ರಹಿಸುವದಕ್ಕೆ ಮನಸ್ಸಿದ್ದರೆ ಬರತಕ್ಕ ಎಲೀಯನು ಇವನೇ ಎಂದು ತಿಳುಕೊಳ್ಳಿರಿ. 15ಕಿವಿಯುಳ್ಳವನು ಕೇಳಲಿ. 16ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ - 17ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ. ಗೋಳಾಡಿದೆವು, ನೀವು ಎದೆಬಡಕೊಳ್ಳಲಿಲ್ಲ ಎಂದು ಕೂಗಿಹೇಳುವಂಥ ಹುಡುಗರನ್ನು ಹೋಲುತ್ತದೆ. 18ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ. 19ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ#11.19 ಮೂಲ : ಸುಂಕದವರ. ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ#11.19 ಕೆಲವು ಪ್ರತಿಗಳಲ್ಲಿ - ಮಕ್ಕಳಿಂದ. ಅಂದರೆ ಜ್ಞಾನಾವಲಂಬಿಗಳಿಂದ ಎಂದು ಬರೆದದೆ; ಲೂಕ. 7.35 ನೋಡಿರಿ. ಜ್ಞಾನವೇ ಎಂದು ಗೊತ್ತಾಗುವದು ಅಂದನು.
ಯೇಸು ನಂಬಿಕೆಯಿಲ್ಲದವರಿಗಾಗಿ ದುಃಖಪಟ್ಟು, ಎಲ್ಲರನ್ನು ತನ್ನ ಹತ್ತರಕ್ಕೆ ಕರೆದದ್ದು
(ಲೂಕ. 10.12-15, 21, 22)
20ಆಗ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳು ದೇವರ ಕಡೆಗೆ ತಿರುಗಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. 21ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. 22ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ. 23ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು. 24ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿನ್ನ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ ಅಂದನು.
25ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. 26ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. 27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.
28ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು. 29ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ; 30ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.
Currently Selected:
ಮತ್ತಾಯ 11: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.