ಮತ್ತಾಯ 14
14
ಅರಸನು ಸ್ನಾನಿಕನಾದ ಯೋಹಾನನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಬಿದ್ದದ್ದು
(ಮಾರ್ಕ. 6.14-29; ಲೂಕ. 9.7-9)
1ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ 2ತನ್ನ ಪರಿವಾರದವರಿಗೆ - ಇವನು ಸ್ನಾನಿಕನಾದ ಯೋಹಾನನು; ತಿರಿಗಿ ಬದುಕಿ ಬಂದಿದ್ದಾನೆ; ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳಿದನು. 3ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ. 4ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು. 5ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ]. 6ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದ್ದರಿಂದ 7ಅವನು ಅವಳಿಗೆ - ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಮಾಡಿ ಮಾತುಕೊಟ್ಟನು. 8ಆಗ ಅವಳು ತನ್ನ ತಾಯಿಯ ಬೋಧನೆಯನ್ನು ಕೇಳಿ - ಇಲ್ಲಿಯೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡು ಅಂದಳು. 9ಆ ಮಾತಿಗೆ ಅರಸನು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಸಂಗಡ ಪಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅದನ್ನು ತಂದುಕೊಡುವದಕ್ಕೆ ಅಪ್ಪಣೆಕೊಟ್ಟನು. 10ಮತ್ತು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು. 11ಅವರು ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು; ಅವಳು ಅದನ್ನು ತನ್ನ ತಾಯಿಯ ಬಳಿಗೆ ತಕ್ಕೊಂಡುಹೋದಳು. 12ಯೋಹಾನನ ಶಿಷ್ಯರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಯೇಸುವಿನ ಬಳಿಗೆ ಬಂದು ತಿಳಿಸಿದರು.
ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು; ಸಮುದ್ರದ ಮೇಲೆ ನಡೆದದ್ದು
(ಮಾರ್ಕ. 6.31-56; ಲೂಕ. 9.10-17; ಯೋಹಾ. 6.1-21)
13ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ವಿಂಗಡವಾಗಿ ಅಡವಿಗೆ ಹೋದನು. ಇದನ್ನು ಕೇಳಿದ ಜನರು ಗುಂಪುಗುಂಪಾಗಿ ತಮ್ಮ ತಮ್ಮ ಊರುಗಳಿಂದ ಕಾಲುನಡಿಗೆಯಿಂದ ಆತನ ಹಿಂದೆ ಬಂದರು.
14ಆತನು ಹೊರಗೆ ಬಂದು ಬಹು ಜನರ ಗುಂಪನ್ನು ಕಂಡು ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. 15ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು - ಇದು ಅಡವಿ, ಈಗ ಹೊತ್ತು ಹೋಯಿತು; ಈ ಗುಂಪಿಗೆ ಅಪ್ಪಣೆ ಕೊಡು; ಅವರು ಹಳ್ಳಿಪಳ್ಳಿಗಳಿಗೆ ಹೋಗಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳಲಿ ಎಂದು ಹೇಳಲಾಗಿ 16ಯೇಸು - ಅವರು ಹೋಗುವದು ಅಗತ್ಯವಿಲ್ಲ; ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು. 17ಅದಕ್ಕವರು - ನಮಗೆ ಇಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಮತ್ತೇನೂ ಇಲ್ಲ ಅನ್ನಲಾಗಿ 18ಆತನು - ಅವುಗಳನ್ನು ಇಲ್ಲಿ ನನಗೆ ತಂದುಕೊಡಿರಿ ಅಂದನು. 19ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು. 20ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. 21ಊಟಮಾಡಿದವರು ಹೆಂಗಸರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ.
22ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು. 23ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು. 24ಅಷ್ಟರಲ್ಲಿ ದೋಣಿಯು ಭೂವಿುಗೆ ಬಹು#14.24 ಮೂಲ: ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ - ಸಮುದ್ರದ ನಡುವೆ ಎಂದು ಬರೆದದೆ. ದೂರ ಹೋಗಿತ್ತು. ಮತ್ತು ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಒದ್ದಾಡುತ್ತಿತ್ತು. 25ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದನು. 26ಸಮುದ್ರದ ಮೇಲೆ ನಡೆಯುವ ಆತನನ್ನು ಶಿಷ್ಯರು ನೋಡಿ ಭೂತವೆಂದು ತತ್ತರಿಸಿ ಭಯದಿಂದ ಕೂಗಿದರು. 27ಕೂಡಲೆ ಯೇಸು ಮಾತಾಡಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು. 28ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು. 29ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. 30ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು. 31ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು. 32ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. 33ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.
34ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿದರು. 35ಆ ಸ್ಥಳದವರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ಆತನ ಬಳಿಗೆ ಕರತರಿಸಿ 36ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.
Currently Selected:
ಮತ್ತಾಯ 14: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.