ಮತ್ತಾಯ 16
16
ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
(ಮಾರ್ಕ. 8.11-21)
1ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು#16.1 ಕೆಲವು ಪ್ರತಿಗಳಲ್ಲಿ 2ನೆಯ 3ನೆಯ ವಚನಗಳು ಇಲ್ಲ. ಅವರಿಗೆ - 2ಸಂಜೇವೇಳೆಯಲ್ಲಿ ನೀವು - ಆಕಾಶವು ಕೆಂಪಾಗಿದೆ, ನಿರ್ಮಲದಿನ ಬರುವದು ಅನ್ನುತ್ತೀರಿ; 3ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ. 4ವ್ಯಭಿಚಾರಿಣಿಯಂತಿರುವ#16.4 ಅಂದರೆ, ದೇವದ್ರೋಹಿಯಾದ. ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.
5ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಾಗ ಯೇಸು ಅವರಿಗೆ - 6ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು - 7ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. 8ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ? 9ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ನೆನಪಿಲ್ಲವೋ? ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಪುಟ್ಟಿ ತುಂಬಿಟ್ಟಿರಿ? 10ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಹೆಡಿಗೆ ತುಂಬಿಟ್ಟಿರಿ? 11ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು. 12ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.
ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು
(ಮಾರ್ಕ. 8.27-29; ಲೂಕ. 9.18-21)
13ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ - ಜನರು ಮನುಷ್ಯಕುಮಾರನೆಂಬ ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು - 14ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು. 15ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನು - 16ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು. 17ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು. 18ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು,#16.18 ಮೂಲ: ಪೇತ್ರೊಸ್, ಅಂದರೆ ಗುಂಡು. ಈ ಬಂಡೆಯ#16.18 ಮೂಲ: ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ. 2.20. ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು. 19ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು. 20ಆಗ ಆತನು - ನಾನು ಕ್ರಿಸ್ತನಾಗಿದ್ದೇನೆಂಬದನ್ನು ಯಾರಿಗೂ ಹೇಳಬೇಡಿರಿ ಎಂದು ಶಿಷ್ಯರಿಗೆ ಖಂಡಿತವಾಗಿ ಹೇಳಿದನು.
ಯೇಸು ತನ್ನ ಮರಣವನ್ನು ಮುಂತಿಳಿಸಿ, ತನ್ನ ಶಿಷ್ಯರು ತನ್ನ ನಿವಿುತ್ತವಾಗಿ ಪ್ರಾಣಬಿಡುವದಕ್ಕೆ ಸಿದ್ಧವಾಗಿರಬೇಕೆಂದು ಬೋಧಿಸಿದ್ದು
(ಮಾರ್ಕ. 8.31—9.1; ಲೂಕ. 9.22-27)
21ಅಂದಿನಿಂದ ಯೇಸು ಕ್ರಿಸ್ತನು#16.21 ಕೆಲವು ಪ್ರತಿಗಳಲ್ಲಿ ಕ್ರಿಸ್ತನೆಂಬ ಪದವು ಇಲ್ಲ. ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು. 22ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು 23ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು. 24ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ. 25ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು. 26ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು? 27ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.
28ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.
Currently Selected:
ಮತ್ತಾಯ 16: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.