YouVersion Logo
Search Icon

ಮತ್ತಾಯ 24

24
ಯೆರೂಸಲೇವಿುನ ನಾಶನವನ್ನೂ ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಕಾಲಜ್ಞಾನ ಹೇಳಿದ್ದು
(ಮಾರ್ಕ. 13.1-31; ಲೂಕ. 21.5-33)
1ಆಮೇಲೆ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ಆತನಿಗೆ ದೇವಾಲಯದ ಕಟ್ಟಣಗಳನ್ನು ತೋರಿಸುವದಕ್ಕೆ ಹತ್ತರಕ್ಕೆ ಬಂದರು. 2ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
3ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು 4ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನಂದರೆ - ಯಾರಾದರೂ ನಿಮ್ಮನ್ನು ಮೋಸಗೊಳಿಸಾರು ನೋಡಿಕೊಳ್ಳಿರಿ. 5ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು - ನಾನು ಕ್ರಿಸ್ತನು, ನಾನು ಕ್ರಿಸ್ತನು ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು. 6ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. 7ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು; 8ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ. 9ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು. 10ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. 11ಬಹುಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. 12ಇದಲ್ಲದೆ ಅಧರ್ಮವು ಹೆಚ್ಚಾಗುವದರಿಂದ ಬಹುಜನರ ಪ್ರೀತಿಯು ತಣ್ಣಗಾಗಿಹೋಗುವದು. 13ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು. 14ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.
15ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) 16ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; 17ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವದನ್ನು ತೆಗೆದುಕೊಳ್ಳುವದಕ್ಕೆ ಇಳಿಯದೆ, 18ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವದಕ್ಕೆ ಹಿಂತಿರುಗಿ ಬಾರದೆ ಓಡಿಹೋಗಲಿ. 19ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ. 20ಆಗ ಮಹಾಸಂಕಟ ಉಂಟಾಗುವದರಿಂದ ನಿಮ್ಮ ಪಲಾಯನವು ಚಳಿಗಾಲದಲ್ಲಿಯಾಗಲಿ ಸಬ್ಬತ್‍ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥನೆಮಾಡಿರಿ. 21ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ. 22[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು. 23ಆಗ ಯಾರಾದರೂ ನಿಮಗೆ - ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ. 24ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 25ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ. 26ಆದಕಾರಣ ಯಾರಾದರೂ ನಿಮಗೆ - ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು ಹೇಳಿದರೆ ಹೊರಟುಹೋಗಬೇಡಿರಿ; ಇಗೋ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ನಂಬಬೇಡಿರಿ. 27ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು. 28ಹೆಣ ಬಿದ್ದಲ್ಲಿ ಹದ್ದುಗಳು ಕೂಡುವವು.
29ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. 30ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು. 31ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.
32ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನೂ ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ. 33ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ#24.33 ಅಥವಾ: ಆತನು ಹತ್ತರದಲ್ಲಿದ್ದಾನೆ, ಬಾಗಲಲ್ಲೇ ಇದ್ದಾನೆ. ದಿನವು ಹತ್ತರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ. 34ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 35ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು
(ಮಾರ್ಕ. 13.32-37; ಲೂಕ. 21.34-36, 19.12-27)
36ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು. 37ನೋಹನ ದಿವಸಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯೂ ಇರುವದು. 38ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು 39ಪ್ರಳಯದ ನೀರು ಬಂದು ಎಲ್ಲರನ್ನು ಬಡುಕೊಂಡುಹೋಗುವ ತನಕ ಏನೂ ತಿಳಿಯದೆ ಇದ್ದರಲ್ಲಾ. ಅದರಂತೆ ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲದಲ್ಲಿಯೂ ಇರುವದು. 40ಆವಾಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಬಿಡಲ್ಪಡುವನು. 41ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕೂತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಒಬ್ಬಳು ಬಿಡಲ್ಪಡುವಳು.
42ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ. 43ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ. 44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. 45ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು? 46ಯಜಮಾನನು ಬಂದು ಯಾವ ಆಳು ಹೀಗೆ ಮಾಡುವದನ್ನು ಕಾಣುವನೋ ಆ ಆಳು ಧನ್ಯನು. 47ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ನೇವಿುಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 48ಆದರೆ ಆ ಕೆಟ್ಟ ಆಳು - ನನ್ನ ಯಜಮಾನನು ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು 49ತನ್ನ ಜೊತೆ ಆಳುಗಳನ್ನು ಹೊಡೆಯುವದಕ್ಕೆ ತೊಡಗಿ ಕುಡಿಕರ ಸಂಗಡ ತಿನ್ನುತ್ತಾ ಕುಡಿಯುತ್ತಾ ಇರುವದಾದರೆ, 50ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ಹೊಡಿಸಿ 51ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

Highlight

Share

Copy

None

Want to have your highlights saved across all your devices? Sign up or sign in