ಮತ್ತಾಯ 28:12-15
ಮತ್ತಾಯ 28:12-15 KANJV-BSI
ಇವರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು - ಅವನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿರುವಾಗ ಅವನನ್ನು ಕದ್ದುಕೊಂಡು ಹೋದರು ಎಂದು ಹೇಳಿರಿ; ಈ ಸುದ್ದಿ ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ಭಯವಿಲ್ಲದ ಹಾಗೆ ಮಾಡುತ್ತೇವೆ ಅಂದರು. ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ.