YouVersion Logo
Search Icon

ಮತ್ತಾಯ 5

5
ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗವು
(ಲೂಕ. 6.20-49, 11.1-4,9-13,33-36, 12.22-24,57-59, 16.17,18)
1ಆತನು ಆ ಜನರ ಗುಂಪುಗಳನ್ನು ಕಂಡು ಬೆಟ್ಟವನ್ನೇರಿ ಕೂತುಕೊಂಡ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. 2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನಂದರೆ -
3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.
4ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.
5ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.
6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.
7ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.
8ನಿರ್ಮಲಚಿತ್ತರು ಧನ್ಯರು; ಅವರು ದೇವರನ್ನು ನೋಡುವರು.
9ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.
10ನೀತಿಯ ನಿವಿುತ್ತವಾಗಿ ಹಿಂಸೆಯನ್ನು ತಾಳಿಕೊಳ್ಳುವವರು ಧನ್ಯರು; ಪರಲೋಕರಾಜ್ಯವು ಅವರದು.
11ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.
13ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು. 14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು. 15ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು. 16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
17ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ವಚನಗಳನ್ನಾಗಲಿ ತೆಗೆದುಹಾಕುವದಕ್ಕೆ ನಾನು ಬಂದೆನೆಂದು ನೆನಸಬೇಡಿರಿ. ತೆಗೆದುಹಾಕುವದಕ್ಕೆ ಬಂದಿಲ್ಲ; ನೆರವೇರಿಸುವದಕ್ಕೆ ಬಂದಿದ್ದೇನೆ. 18ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು. 19ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು. 20ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
21ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ. 22ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ#5.22 ಮೂಲ: ಬೆಂಕಿಯ ಗೆಹೆನ್ನಕ್ಕೆ. ಗುರಿಯಾಗುವನು. 23ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವದೆ ಎಂಬದು ನಿನ್ನ ನೆನಪಿಗೆ ಬಂದರೆ, 24ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟುಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
25ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ. 26ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
27ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬದಾಗಿ ನೀವು ಕೇಳಿದ್ದೀರಷ್ಟೆ. 28ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು. 29ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ. 30ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.
31ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ತ್ಯಾಗಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. 32ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.
33ಮತ್ತು - ನೀನು ಸುಳ್ಳಾಣೆಯಿಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ. 34ಆದರೆ ನಾನು ನಿಮಗೆ ಹೇಳುವದೇನಂದರೆ - ಆಣೆಯನ್ನೇ ಇಡಬೇಡ. ಆಕಾಶದ ಮೇಲೆ ಆಣೆ ಇಡಬೇಡ; ಅದು ದೇವರ ಸಿಂಹಾಸನವು. 35ಭೂವಿುಯ ಮೇಲೆ ಆಣೆ ಇಡಬೇಡ; ಅದು ಆತನ ಪಾದಪೀಠವು. ಯೆರೂಸಲೇವಿುನ ಮೇಲೆ ಆಣೆ ಇಡಬೇಡ; ಅದು ಆ ದೊಡ್ಡ ಅರಸನ ಪಟ್ಟಣವಾಗಿದೆ. 36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕರ್ರಗೆ ಮಾಡಲಾರಿ. 37ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.
38ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗಿಸು ಅಂತ ಹೇಳಿಯದೆ ಎಂದು ಕೇಳಿದ್ದೀರಷ್ಟೆ. 39ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು. 40ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತಕ್ಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಡು. 41ಒಬ್ಬನು - ಒಂದು ಮೈಲು ದೂರ ಬಾ ಎಂದು ನಿನ್ನನ್ನು ಬಿಟ್ಟೀಹಿಡಿದರೆ ಅವನ ಸಂಗಡ ಎರಡು ಮೈಲು ಹೋಗು. 42ನಿನ್ನನ್ನು ಬೇಡುವವನಿಗೆ ಕೊಡು; ನಿನ್ನಲ್ಲಿ ಕಡಾ ಈಸಿಕೊಳ್ಳಬೇಕೆಂದು ಬಂದವನಿಗೆ ಮುಖತಿರುವಿಕೊಳ್ಳಬೇಡ.
43ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ. 44ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. 45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ. 46ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಭ್ರಷ್ಟರೂ#5.46 ಮೂಲ: ಸುಂಕದವರೂ. ಹಾಗೆ ಮಾಡುವದಿಲ್ಲವೇ. 47ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನಗಳು ಸಹ ಹಾಗೆ ಮಾಡುವದಿಲ್ಲವೇ. 48ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.

Highlight

Share

Copy

None

Want to have your highlights saved across all your devices? Sign up or sign in